ಹಾಸನ ಸಮಾಚಾರ ಬೇಲೂರು
ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿಯಾಗಿದೆ. ಆದರೆ ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಆಟದಲ್ಲಿ ಪಾಲ್ಗೊಳ್ಳಬೇಕು. ಸೋಲಿಗೆ ಕುಗ್ಗಬಾರದು ಹಾಗೂ ಗೆಲ್ಲುವ ಛಲವನ್ನು ಬಿಡಬಾರದು ಎಂದು ವಕೀಲಾರ ಎಮ್.ಆರ್ ಜಯಣ್ಣ ಕಿವಿ ಮಾತು ಹೇಳಿದರು.
ತಾಲ್ಲೂಕಿನ ಬಿಕ್ಕೋಡು ಹೋಬಳಿ ಮದಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ನ್ಮು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆ ಬಹಳ ಅವಶ್ಯಕವಾಗಿ ಬೇಕಿದೆ. ಶಿಕ್ಷಣದಿಂದ ಬೌದ್ದಿಕ ಮಟ್ಟ ಸುಧಾರಣೆಯಾದರೆ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತರೇ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಸಾಧಕರಾಗಿ ದೇಶದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ ಎಂದ ಅವರು, ದೇಶ, ವಿದೇಶಗಳಲ್ಲಿ ಕ್ರಿಕೆಟ್, ಹಾಕಿ, ಪುಟ್ಬಾಲ್, ಅಥ್ಲೆಟ್ಸ್, ಬಾಕ್ಸಿಂಗ್ ಹೀಗೆ ನಾನಾ ಕ್ರೀಡೆಗಳು ನಡೆಯುತ್ತವೆ. ಇದರಿಂದ ದೇಶ-ವಿದೇಶಗಳ ವಿಶೇಷತೆಯನ್ನು ತಿಳಿದುಕೊಳ್ಳುವುದರ ಜತೆಗೆ, ಜ್ಞಾನ ವಿಕಸನಕ್ಕೆ ಅನುಕೂಲವಾಗುತ್ತದೆ. ಕ್ರೀಡೆಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ, ಯುವಜನರು ಹಾಕಿ, ಕ್ರಿಕೆಟ್ ಸೇರಿದಂತೆ ಅಥ್ಲೆಟಿಕ್ ಕ್ರೀಡೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ, ಪ್ರತಿಯೊಬ್ಬರೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಸೋಲು-ಗೆಲುವನ್ನು ಸ್ವೀಕರಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಯೋಜಕರಾದ ಶ್ರೀಕಾಂತ್, ಮಂಜುನಾಥ್, ಸಂದೀಪ್, ಮಹೇಂದ್ರ, ಯತೀಶ್, ತ್ಯಾಗರಾಜ್ ಸೇರಿದಂತೆ ಮತ್ತಿತರರು ಮದಘಟ್ಟ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.





